Latest

ವಿರೋಧಿ ಬಣಕ್ಕೆ ಸಿಎಂ ಖಡಕ್ ತಿರುಗೇಟು

ಪ್ರಗತಿವಾಹಿನಿ ಸುದ್ದಿ; ಹಾಸನ: ಇನ್ನೂ ಎರಡು ವರ್ಷಗಳ ಕಾಲ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಈ ಬಗ್ಗೆ ಯಾವುದೇ ಗೊಂದಲಗಳೂ ಬೇಡ ಎಂದು ಹೇಳುವ ಮುಲಕ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ವಿರೋಧಿ ಬಣಕ್ಕೆ ಮತ್ತೊಮ್ಮೆ ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಸಿಎಂ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಅವರೇ ಸ್ಪಷ್ಟನೆ ನೀಡಿರುವಾಗ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಹಾಗಾಗಿ ಇನ್ನೂ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದರು.

Home add -Advt

ಪ್ರಧಾನಿ ಮೋದಿ, ಅಮಿತ್ ಶಾ ಅವರು ನನ್ನ ಮೇಲೆ ವಿಶ್ವಾಸವಿಟ್ಟು ನಾಯಕತ್ವ ನೀಡಿದ್ದಾರೆ. ಈಗ ವರಿಷ್ಠರೇ ಸ್ಪಷ್ಟನೆಗಳನ್ನು ನೀಡಿರುವಾಗ ನನ್ನ ಜವಾಬ್ದಾರಿ ಇನ್ನೂ ಹೆಚ್ಚಿದೆ. ಇನ್ನೂ ಎರಡುವರ್ಷ ನಾನೇ ಮುಖ್ಯಮಂತ್ರಿಯಾಗಿದ್ದು, ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು, ಜನಪರ ಕಾರ್ಯಗಳನ್ನು ಕೈಗೊಳ್ಳುತ್ತೇನೆ ಎಂದು ಹೇಳಿದರು.

ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್: ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಪ್ರತಿಭಟನೆ

Related Articles

Back to top button