Latest

ದ್ವೀತೀಯ ಪಿಯುನಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸಿಎಂ ಅಭಿನಂದನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ಹಾಗೆಯೇ ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳು ಕುಗ್ಗದೆ, ಮುಂದಿನ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸುವಂತೆ ವಿಶ್ವಾಸ ತುಂಬಿದ್ದಾರೆ.

ಇಂದು ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಪಡೆದ ಎಲ್ಲ ಮಕ್ಕಳಿಗೂ ಶುಭ ಹಾರೈಸುತ್ತೇನೆ. ತೇರ್ಗಡೆಯಾಗಿರುವ ಮಕ್ಕಳಿಗೆ ಅಭಿನಂದನೆಗಳು. ಸ್ವಲ್ಪ ಹಿನ್ನಡೆಯಾಗಿದ್ದಲ್ಲಿ ಧೈರ್ಯ, ವಿಶ್ವಾಸ ಕಳೆದುಕೊಳ್ಳದೆ, ಹಿನ್ನಡೆಯನ್ನು ಸವಾಲಾಗಿ ಸ್ವೀಕರಿಸಿ, ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಿ. ತಂದೆ- ತಾಯಿಗಳಿಗೆ ಹೆಮ್ಮೆ, ದೇಶಕ್ಕೆ ಕೀರ್ತಿ ತರುವ ಸಾಧನೆ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button