Latest

ಕೊರೊನಾ ಸಮರ ಗೆದ್ದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ 19 ನಿಂದ ಸಂಪೂರ್ಣ ಗುಣಮುಖರಾಗಿ ಮಣಿಪಾಲ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕು ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಕಳೆದ 9 ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಎರಡನೇ ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಬೆಳಗ್ಗೆ ಸಿಎಂ ವರದಿ ನೆಗೆಟಿವ್ ಬಂದಿದೆ. ಅಲ್ಲದೇ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬಂದಿದೆ. ಯಡಿಯೂರಪ್ಪನವರು ಸಂಪೂರ್ಣವಾಗಿ ಗುಣಮುಖರಾಗಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

Home add -Advt

ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಸಿಎಂ ಯಡಿಯೂರಪ್ಪ ಕಾವೇರಿ ನಿವಾಸಕ್ಕೆ ಆಗಮಿಸಿದ್ದು, ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಸ್ವತ: ಕೊರೊನಾ ವಾರಿಯರ್ ಆಗಿರುವುದರಿಂದ ಕ್ವಾರಂಟೈನ್ ನಿಯಮಗಳಿಂದ ವಿನಾಯಿತಿ ಇದ್ದು, ನಾಳೆಯಿಂದಲೇ ಅವರ ಕೆಲಸಗಳಲ್ಲಿ ತೊಡಗಿಕೊಳ್ಳಬಹುದು ಎನ್ನಲಾಗಿದೆ.

Related Articles

Back to top button