Latest

ಸಿಎಂ ಯಡಿಯೂರಪ್ಪ ಬೆನ್ನಲ್ಲೇ ಪುತ್ರಿಗೂ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಿ ಎಸ್ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟೀವ್ ಬಂದಿರುವ ಹಿನ್ನಲೆಯಲ್ಲಿ ಸಿಎಂ ಕುಟುಂಬದವರೆಲ್ಲರೂ ಹೋಂ ಕ್ವಾರಂಟೈನ್ ಆಗಿದ್ದಾರೆ.

ಸಿಎಂ ಯಡಿಯೂರಪ್ಪ ಕೊರೊನಾ ಪಾಸಿಟೀವ್ ಬಂದ ಬಳಿಕ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಪುತ್ರ ವಿಜಯೇಂದ್ರ ತಡ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಬಳಿಕ ವಿಜಯೇಂದ್ರ ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ.

Home add -Advt

ಇನ್ನು ಸಿಎಂ ಪುತ್ರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ಜತೆ ಸಂಪರ್ಕದಲ್ಲಿದ್ದ ಎಲ್ಲರೂ ಹಾಗೂ ಸಿಎಂ ನಿವಾಸದ ಸಿಬ್ಬಂದಿಗಳೆಲ್ಲರೂ ಕೊವಿಡ್ ಟೆಸ್ಟ್ ಗೆ ಒಳಗಾಗಿದ್ದಾರೆ.

Related Articles

Back to top button