
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೋನ ವೈರಸ್ ಬಗ್ಗೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ಇಲ್ಲ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ವೈರಸ್ ಬಗ್ಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಜನರು ಭಯಪಡುವ ಅಗತ್ಯವಿಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದರು.
ಕೊರೋನ ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ರಾಜ್ಯ ಸರ್ಕಾರಗಳು ವಿಶೇಷ ಗಮನಹರಿಸಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಸಚಿವರು ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.
ಸೋಂಕು ಹರಡದಂತೆ ತಡೆಯಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿರುವುದರಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ