Latest

ತಂದೆಯ ಆರೋಗ್ಯ ಸ್ಥಿರವಾಗಿದೆ ಎಂದ ಸಿಎಂ ಪುತ್ರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಂದೆಯ ಆರೋಗ್ಯ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಮುಂಜಾಗ್ರತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯ ಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ ಹಾರೈಸಿ. ನಾನು ಗೃಹ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಭಾನುವಾರ ರಾತ್ರಿ ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಕುರಿತು ಸ್ವತ: ಸಿಎಂ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದರು. ಇದೇ ವೇಳೆ ಸಿಎಂ ಪುತ್ರಿ ಪದ್ಮಾವತಿಯವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸಿಎಂ ಹಾಗೂ ಪುತ್ರಿ ಇಬ್ಬರನ್ನೂ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

Related Articles

Back to top button