ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಲ್ಕನೇ ಬಾರಿಗೆ ಕೋವಿಡ್ ಟೆಸ್ಟ್‌ಗೆ ಒಳಗಾಗಿದ್ದು, ಈ ಬಾರಿಯೂ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿರುವುದರಿಂದ ಸಿಎಂ ನಿಟ್ಟುಸಿರುಬಿಟ್ಟಿದ್ದಾರೆ.
ಸಿಎಂ ಯಡಿಯೂರಪ್ಪ ನಿವಾಸ ಮತ್ತು ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅಲ್ಲದೇ ಬೆಂಗಾವಲು ಪಡೆಗೂ ಸೋಂಕು ದೃಢಪಟ್ಟಿದ್ದರಿಂದ ಸಿಎಂ ಯಡಿಯೂರಪ್ಪ ಕೂಡ ಕೊರೊನಾ ಭೀತಿಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಇದೀಗ ವರದಿ ಬಂದಿದ್ದು, ನೆಗೆಟಿವ್ ಬಂದಿದೆ.
ಇದುವರೆಗೆ ಸುಮಾರು ನಾಲ್ಕು ಬಾರಿ ಸಿಎಂ ಯಡಿಯೂರಪ್ಪ ಕೋವಿಡ್ ಪರೀಕ್ಷೆ ಮಾಡಿಸಿದ್ದಾರೆ. ಈ ಎಲ್ಲಾ ಟೆಸ್ಟ್‌ಗಳಲ್ಲಿ ಸಿಎಂಗೆ ಕೊರೊನಾ ನೆಗೆಟಿವ್ ಬಂದಿದೆ. ಇದರಿಂದ ಸಿಎಂ ಮತ್ತು ಸಿಎಂ ಸಂಪರ್ಕದಲ್ಲಿದ್ದ ಅಧಿಕಾರಿಗಳು ನಿರಾಳರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ