Latest

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಲದಿನಗಳ ಹಿಂದೆ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಸಿಎಂ ಯಡಿಯೂರಪ್ಪನವರಿಗೆ ಇಂದು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಮುಖವಾದ ಅಂಶವೆಂದರೆ ಸಿಎಂ ಯಡಿಯೂರಪ್ಪ ಕೆಲದಿನಗಳ ಹಿಂದಷ್ಟೇ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಎರಡು ದಿನಗಳಿಂದ ಜ್ವರವಿದ್ದಾಗ್ಯೂ ಕೂಡ ಸಿಎಂ ಯಡಿಯೂರಪ್ಪ ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ನಿನ್ನೆ ನಡೆದ ರೋಡ್ ಶೋ ವೇಳೆ ತೀವ್ರವಾದ ಸುಸ್ತು ಕಾಣಿಸಿಕೊಂಡ ಕಾರಣಕ್ಕೆ ರೋಡ್ ಶೋ ಅರ್ಧಕ್ಕೆ ಮೊಟಕುಗೊಳಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಇದೀಗ ಸಿಎಂ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್ ಬಂದಿದೆ.

Home add -Advt

Related Articles

Back to top button