Latest

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ; ಚಾಲನೆ ನೀಡಿದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಅದರಂತೆ ರಾಜ್ಯದಲ್ಲಿ ಕೂಡ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆ ಅಭಿಯಾನಕ್ಕೆ ಸಾಂಕೇತಿಕ ಚಾಲನೆ ನೀಡಿದರು.

ಬೆಂಗಳೂರಿನ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಸಿಕಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನಿಡಿದರು.

ಈ ವೇಳೆ ಮಾತನಾಡಿದ ಸಿಎಂ, ಕೋವಿಡ್ ಲಸಿಕೆ ಅಭಿಯಾನ ಆರಂಭವಾಗುತ್ತಿರುವ ಈ ದಿನ ಬಹಳ ಮಹತ್ವದ ದಿನವಾಗಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದಲ್ಲಿ ಲಸಿಕೆ ನೀಡಿಕೆ ಸಾಂಕೇತಿಕವಾಗಿ ಆರಂಭಿಸಲಾಗಿದೆ. ನಮ್ಮ ಬಳಿ 1 ಲಕ್ಷ ಲಸಿಕೆ ಸಂಗ್ರಹವಿದೆ. ಕೇಂದ್ರದಿಂದ 3 ಲಕ್ಷ ಲಸಿಕೆ ಬಂದಿದ್ದು, ಒಟ್ಟು 4 ಲಕ್ಷ ಡೋಸ್ ಲಸಿಕೆಯಿದೆ. ಒಂದೆರಡು ದಿನಗಳಲ್ಲಿ ಇನ್ನಷ್ಟು ಲಸಿಕೆಗಳು ಪೂರೈಕೆಯಾಗಲಿದ್ದು, ಅಭಿಯಾನ ದೊಡ್ಡ ಪ್ರಮಾಣದಲ್ಲಿ ಮುಂದುವರೆಯಲಿದೆ ಎಂದರು.

ಇದೇ ವೇಳೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಪಾಲನೆ ಮಾಡಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವ ಮೂಲಕ ಕೊರೊನಾ ಮಹಾಮಾರಿಯನ್ನು ತಡೆಯಲು ಸಹಕರಿಸಿ ಎಂದು ಕರೆ ನೀಡಿದರು.
ತನ್ನ 3 ತಿಂಗಳ ವೇತನ ಆಶಾ ಕಾರ್ಯಕರ್ತೆಯರಿಗೆ ಘೋಷಣೆ ಮಾಡಿದ ಶಾಸಕ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button