ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ, ಸೋಂಕು ನಿಯತ್ರಣಕ್ಕೆ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಜನರು ಸಾಯುತ್ತಿದ್ದರೂ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮಾಡುತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆದ ಘಟನೆ ನಡೆದಿದೆ.
ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಕೊರೊನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಮಾಡಿರುವ ಬಿಗಿ ಕ್ರಮಗಳನ್ನು ಸಮರ್ಪಕವಾಗಿ ಜಾರಿ ಮಾಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ನಿಯಂತ್ರಿಸಲು ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ? ಜನರನ್ನು ಉಳಿಸಲು ಅಧಿಕಾರಿಗಳು ಕೈಗೊಂಡಿರುವ ಕ್ರಮಗಳಾದರೂ ಏನು ಎಂದು ಪ್ರಶ್ನಿಸಿರುವ ಸಿಎಂ, ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರು ಸೇರಿದಂತೆ ಸೋಂಕು ಹೆಚ್ಚುತ್ತಿರುವ 7 ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚಿಸುವಂತೆ ತಾಕೀತು ಮಾಡಿದ್ದಾರೆ. ಅಲ್ಲದೇ ಜಿಲ್ಲೆಗಳಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಮೊದಲ ಡೋಸ್ ಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.
ಬೆಳಗಾವಿಯಲ್ಲಿ ಕೋವಿಡ್ ಗೆ 90 ಶಿಕ್ಷಕರು ಬಲಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ