ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೆಹಲಿ ಪ್ರವಾಸ ಸಾಕಷ್ಟು ಕುತೂಹಲ ಮೂಡಿಸಿದ್ದು, ಕುಟುಂಬ ಸದಸ್ಯರ ಜೊತೆ ಕೆಲ ಅಧಿಕಾರಿಗಳನ್ನೊಳಗೊಂಡ ತಂಡದೊಂದಿಗೆ ತೆರಳುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಬಾರಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಹಿರಿಯ ಸಚಿವರು ದೆಹಲಿಗೆ ಪ್ರಯಾಣಿಸುತ್ತಿಲ್ಲ ಎನ್ನಲಾಗಿದೆ. ಸಿಎಂ ಯಡಿಯೂರಪ್ಪ, ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳ ಟೀಂ ಜೊತೆ ದೆಹಲಿಗೆ ಹೊರಟಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಬಿಎಸ್ ವೈ ಜೊತೆ ತೆರಳುತ್ತಿರುವ ಕುಟುಬ ಸದಸ್ಯರು ಹಾಗೂ ಅಧಿಕಾರಿಗಳ ಹೆಸರಿರುವ ಪ್ರಯಾಣಿಕರ ಪಟ್ಟಿ ಲಭ್ಯವಾಗಿದ್ದು, ಬಿಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ, ಲೆಹರ್ ಸಿಂಗ್, ಶಶಿಧರ್, ಗಿರೀಶ್ ಹೊಸೂರ್, ಸುಧೀರ್ ಕುಮಾರ್ ಸಿಂಗ್ ಸೇರಿದಂತೆ ಒಟ್ಟು 8 ಜನರು ದೆಹಲಿಗೆ ಪ್ರಯಾಣಿಸುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮೂಲಕ ತೆರಳುತ್ತಿದ್ದಾರೆ ಎನ್ನಲಾಗಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ಪದೇ ಪದೇ ಸ್ವಪಕ್ಷೀಯ ಶಾಸಕರೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದು, ನಾಯಕತ್ವ ಬದಲಾವಣೆ ಕುರಿತಾಗಿಯೂ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲಿ ಇದೀಗ ಕುಟುಂಬ ಸದಸ್ಯರು ಹಾಗೂ ಕೆಲ ಅಧಿಕಾರಿಗಳ ತಂಡದೊಂದಿಗೆ ಸಿಎಂ ದೆಹಲಿಗೆ ತೆರಳುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಇಂದು ದೆಹಲಿಗೆ ಹೋಗಲಿರುವ ಬಿಎಸ್ ವೈ: 3 ಪ್ರಮುಖ ಕಾರಣ
ದೆಹಲಿ ಭೇಟಿಗೂ ಮುನ್ನ ಸಿಎಂ ಯಡಿಯೂರಪ್ಪ ಜೊತೆ ಪ್ರಧಾನಿ ಮೋದಿ ಸಭೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ