Latest

ಹಿಂದಿನ ಸರ್ಕಾರಗಳು ಕೈಕಟ್ಟಿ ಕುಳಿತಿದ್ದವು -ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ 10 ವರ್ಷಗಳಿಂದಲೂ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಡೆಯುತ್ತಿದ್ದರೂ ಯಾವುದೇ ಸರ್ಕಾರಗಳು ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿಗೆ ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ಜಾಲದೊಂದಿಗೆ ಇರುವವರ ಕೆಲವರ ಬಣ್ಣ ಈಗ ಬಯಲಾಗುತ್ತಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಈ ಹಿಂದಿನ ಸರ್ಕಾರಗಳು ಡ್ರಗ್ಸ್ ಮಾಫಿಯಾ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಕೈಕಟ್ಟಿ ಕುಳಿತಿದ್ದವು. ಆದರೆ ಈ ಸಾರಿ ನಾವು ಆ ಬಗ್ಗೆ ಸಮಗ್ರವಾಗಿ ತನಿಖೆ ತಡೆಸುತ್ತಿದ್ದೇವೆ ಎಂದರು.

Home add -Advt

ಕೋವಿಡ್ ಮತ್ತು ಮಳೆ ಹಾನಿ ಸಂಬಂಧ ಡಿಸಿಗಳ ಹಾಗೂ ಸಿಇಓಗಳ ಜತೆ ಸಭೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದೇವೆ. ವಿಸ್ತೃತವಾಗಿ ಚರ್ಚೆ ನಡೆಸಲಾಗುತ್ತಿದೆ. ಎಲ್ಲಾ ಡಿಸಿಗಳ ಅಕೌಂಟ್ ನಲ್ಲಿ 25 ರಿಂದ 30 ಕೋಟಿ ಹಣವಿದೆ. ಯಾವುದೇ ಹಣದ ಕೊರೆತೆ ಇಲ್ಲ ಎಂದು ತಿಳಿಸಿದರು.

Related Articles

Back to top button