Latest

ಕಪ್ಪು ಪಟ್ಟಿಯಾದರೂ ಧರಿಸಲಿ, ಬಿಳಿಯಾದರೂ ಧರಿಸಲಿ; ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಗೆ ಬೆಂಬಲಿಸಿ ರಾಜ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದು, ರೈತರನ್ನು ದಾರಿ ತಪ್ಪಿಸುತ್ತಿರುವ ವಿಪಕ್ಷಗಳ ಕೆಲಸವಾಗಿದೆ ಎಂದಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಿ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ. ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ರೈತರ ಪ್ರತಿಭಟನೆಗೆ ಬೆಂಬಲಿಸಿರುವ ಕಾಂಗ್ರೆಸ್, ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುತ್ತಿರುವ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಕಪ್ಪು ಪಟ್ಟಿಯಾದರೂ ಧರಿಸಲಿ, ಬಿಳಿಯಾದರೂ ಧರಿಸಲಿ ಎಂದು ವ್ಯಂಗ್ಯವಾಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button