ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೈತರ ಪ್ರತಿಭಟನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದ್ದು, ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ರೈತ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ರೈತರ ಪರೇಡ್ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ರೈತ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಹೋರಾಟ ಶಾಂತಿಯುತವಾಗಿದ್ದರೆ ನಮ್ಮ ಅಭ್ಯಂತರವಿಲ್ಲ. ಆದರೆ ಅವರಿಗೆ ತಾವು ಯಾಕೆ ಹೋರಾಟ ಮಾಡುತ್ತಿದ್ದೇವೆ ಎಂಬುದೇ ಗೊತ್ತಿಲ್ಲ ಎಂದು ಹೇಳಿದರು.
ರೈತ ಮುಖಂಡರು ಅನಗತ್ಯವಾಗಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ರೈತರು ಬಂದು ಮಾತನಾಡಲು ಮನೆಯ ಬಾಗಿಲು ಸದಾ ತೆರೆದಿರುತ್ತದೆ. ಅವರು ಯಾವತ್ತುಬೇಕಿದ್ದರೂ ಬಂದು ಮಾತನಾಡಬಹುದು. ಜನರಿಗೆ ತೊಂದರೆಯಾಗಬಾರದು ಎಂದು ಟ್ರ್ಯಾಕ್ಟರ್ ಗಳಿಗೆ ಅನುಮತಿ ನೀಡಿಲ್ಲ ಹೊರತು ಹೋರಾಟ ತಡೆಯಲೆಂದು ಅಲ್ಲ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ