Latest

ಆಸ್ಪತ್ರೆಯಿಂದ ವಿಡಿಯೋ ಸಂದೇಶ ಕಳುಹಿಸಿದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಮೊದಲ ವಿಡಿಯೋ ಸಂದೇಶ ಕಳುಹಿಸಿದ್ದಾರೆ. ಯಾರೂ ಆತಂಕ ಪಡುವುದು ಬೇಡ, ಆರೋಗ್ಯವಾಗಿದ್ದೇನೆ. ಬೇಗ ಗುಣಮುಖನಾಗುತ್ತೇನೆಂದು ವೈದ್ಯರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಭಾನುವಾರ ರಾತ್ರಿ 8-9 ಗಂಟೆಗೆ ಕೊರೊನಾ ಪಾಸಿಟಿವ್ ಎಂದು ತಿಳಿಯಿತು. ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ಭಾನುವಾರ ರಾತ್ರಿ ಹಾಗೂ ಇಂದು ಬೆಳಗ್ಗೆ ಪರೀಕ್ಷೆ ಮಾಡಿ ಯಾವುದೇ ತೊಂದರೆ ಇಲ್ಲ ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ಹೇಳಿದ್ದಾರೆ ಎಂದರು.

Related Articles

ಈಗಾಗಲೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಅನೇಕ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸರ್ಕಾರದ ಯಾವುದೇ ಕೆಲಸಗಳಿಗೆ ಅಡ್ಡಿಯಾಗಬಾರದೆಂದು ಸೂಚಿಸಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಗುಣಮುಖನಾಗಿ ಹೊರ ಬಂದು ಕರ್ತವ್ಯದಲ್ಲಿ ತೊಡಗುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಬೆಂಬಲ ಇರಲಿ. ನಾಡಿನ ಆರೂವರೆ ಕೋಟಿ ಜನರ ಆರೋಗ್ಯ ಮುಖ್ಯ. ಎಲ್ಲರೂ ದಯವಿಟ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್ ಧರಿಸಿ. ಇದರಿಂದ ಮಾತ್ರ ಕೊರೊನಾದಿಂದ ತಪ್ಪಿಸಿಕೊಳ್ಳಲು ಸಾಧ್ಯ ಎಂದು ಮನವಿ ಮಾಡಿದ್ದಾರೆ.

Home add -Advt

Related Articles

Back to top button