ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯ ರಾಜಕೀಯದ ಕುರಿತು ಮಹತ್ವದ ಚರ್ಚೆ ನಡೆಸಿದರು.
ನವದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ನಡ್ಡಾ ನಿವಾಸಕ್ಕೆ ತೆರಳಿದ ಸಿಎಂ ಬಿ.ಎಸ್.ವೈ ಜೆ.ಪಿ.ನಡ್ಡಾ ಅವರೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.
ಜೆ.ಪಿ.ನಡ್ಡಾ ಭೇಟಿ ಬಳಿಕ ಮಾತನಾಡಿದ ಸಿಎಂ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಎಂಬುದು ಸುಳ್ಳು.ರಾಜೀನಾಮೆ ನೀಡಿದ್ದರೆ ಮುಚ್ಚಿಡುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡುವಂತೆ ನನಗೆ ಯಾರೊಬ್ಬರೂ ಸೂಚಿಸಿಲ್ಲ. ರಾಜೀನಾಮೆ ಎಂಬ ಒಂದೇ ಒದು ಪದ ಕೂಡ ಚರ್ಚೆಯಾಗಿಲ್ಲ. ಅನಗತ್ಯ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ನಡ್ಡಾ ಭೇಟಿ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಿತು. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಎಂ ಅವರನ್ನು ಭೇಟಿಯಾಗುತ್ತಿದ್ದು, ಅವರೊಂದಿಗೂ ಚರ್ಚೆ ನಡೆಸುವುದಾಗಿ ತಿಳಿಸಿದರು.
ಇನ್ನು ನಿನ್ನೆ ಸಂಜೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿರುವ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ, ಮೂರನೆ ಅಲೆ ಎದುರಿಸಲು ನಡೆಸಿರುವ ತಯಾರಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದ್ದಾರೆ. ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚೆ ನಡೆದಿಲ್ಲ ಎನ್ನಲಾಗಿದೆ.
ವಿರೋಧಿ ಬಣಕ್ಕೆ ಮತ್ತೆ ಖಡಕ್ ಸಂದೇಶ ನೀಡಿದ ಸಿಎಂ ಬಿಎಸ್ ವೈ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ