
ಪ್ರಗತಿವಾಹಿನಿ ಸುದ್ದಿ; ಪಣಜಿ: ಸಿಎಂ ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಿಂದ ಹಿಂದೆ ಸರಿದಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದ್ದಾರೆ.
ಗೋವಾದಲ್ಲಿ ಮಾತನಾಡಿದ ಜೆ.ಪಿ ನಡ್ಡಾ, ಸಿಎಂ ಬಿಎಸ್.ವೈ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದು, ಕರ್ನಾಟಕದಲ್ಲಿ ಯಡಿಯೂರಪ್ಪ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೆಹಲಿಯೇ ಬೇರೆ. ಕರ್ನಾಟಕ ರಾಜಕಾರಣವೇ ಬೇರೆ. ಕರ್ನಾಟಕದಲ್ಲಿ ಯಾವುದೇ ರಾಜಕೀಯ ಅಸ್ಥಿರತೆ ಗೊಂದಲಗಳೂ ಇಲ್ಲ ಎಂದು ತಿಳಿಸಿದ್ದಾರೆ
ಈ ಮೂಲಕ ಜೆ.ಪಿನಡ್ಡಾ ಯಡಿಯೂರಪ್ಪಗೆ ಶಹಬಾಸ್ ಗಿರಿ ನೀಡಿದ್ದಾರೆ.
ಬಿಎಸ್ ವೈಗೆ ಟಾಂಗ್ ನೀಡಿದ ಸಿ.ಟಿ.ರವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ