ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಜುಲೈ 25 ಅಥವಾ 26ರಂದು ಹೊಸ ಬಿರುಗಾಳಿ ಬೀಸಲಿದೆಯೇ ಎಂಬ ಕುತೂಹಲ ಮೂಡಿದೆ. ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿ ಭೇಟಿ ಬಳಿಕ ನಿನ್ನೆ ವೈರಲ್ ಆದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ಸಿಎಂ ಬದಲಾವಣೆ ಕುರಿತಾಗಿ ಆಪ್ತ ಹಾಗೂ ವಿರೋಧಿ ಬಣಗಳ ನಡುವೆ ವಿಭಿನ್ನ ಚರ್ಚೆಗಳು ಆರಂಭವಾಗಿವೆ.
ಸಿಎಂ ಯಡಿಯೂರಪ್ಪ ಹೈಕಮಾಂಡ್ ಭೇಟಿ ಬೆನ್ನಲ್ಲೇ ಜು. 25 ಅಥವಾ 26ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸಭೆ, ಔತಣಕೂಟ ಎಂದು ಹೇಳಲಾಗುತ್ತಿದೆ. ಆದರೆ ಇದರ ಹಿನ್ನೆಲೆ ಬೇರೆಯೇ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಸಭೆಯಲ್ಲಿ ಸಿಎಂ ರಾಜೀನಾಮೆ ಬಗ್ಗೆ ಹೇಳಿಕೆಗಳನ್ನು ನೀಡಲಿದ್ದಾರಾ ಅಥವಾ ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತಾಗಿ ಘೋಷಿಸಲಿದ್ದಾರಾ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಇನ್ನು 2023ರ ಚುನಾವಣೆಗೆ ಬಿಜೆಪಿ ಸಿದ್ಧತೆ ಬಗ್ಗೆ ಚರ್ಚಿಸಲು ಸಭೆ ಕರೆದಿರುವ ಸಾಧ್ಯತೆ ಇದ್ದು, ಎಲೆಕ್ಷನ್ ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಸಭೆ ಮೂಲಕ ತಮ್ಮ ಪರ ಹಾಗೂ ವಿರೋಧ ಇರುವ ಶಾಸಕರ ತಾಳೆಹಾಕುವ ಲೆಕ್ಕಾಚಾರ ನಡೆಸುವುದೂ ಕೂಡ ಸಿಎಂ ಉದ್ದೇಶ ಎಂದು ಹೇಳಲಾಗುತ್ತಿದೆ.
ನಳಿನ್ ಕುಮಾರ ಕಟೀಲು ಆಡಿಯೋ ಬಹಿರಂಗ: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸಾಧ್ಯತೆ (ಆಡಿಯೋ ಸಹಿತ ವರದಿ)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ