ರೈತರ ಖಾತೆಗೆ ಏಪ್ರಿಲ್ 10 ರೊಳಗೆ 2 ಸಾವಿರ ರೂ. ಜಮಾ: ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಏಪ್ರಿಲ್ 10ರೊಳಗೆ ಹಣ ಜಮಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಏಪ್ರಿಲ್ 10ರೊಳಗೆ ಕೃಷಿಕರ ಬ್ಯಾಂಕ್ ಖಾತೆಗೆ 2000 ರೂಪಾಯಿ ಜಮಾ ಆಗಲಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ ಎರಡು ತಿಂಗಳ ಪಿಂಚಣಿ ಮುಂಗಡವಾಗಿ ಏಪ್ರಿಲ್ 10 ರೊಳಗೆ ಖಾತೆಗೆ ಜಮಾ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Home add -Advt

ಬಡ ಕುಟುಂಬದವರಿಗೆ ಅರ್ಧ ಲೀಟರ್ ಹಾಲು ಉಚಿತವಾಗಿ ನೀಡಲಾಗುತ್ತಿದೆ. ರಾಜ್ಯದ 15 ಲಕ್ಷ ಫಲಾನುಭವಿಗಳ ಖಾತೆಗೆ ಗ್ಯಾಸ್ ಸಿಲಿಂಡರ್ ವೆಚ್ಚ ಜಮಾ ಮಾಡುವ ಕಾರ್ಯ ಆರಂಭವಾಗಿದೆ ಎಂದು ಹೇಳಿದ್ದಾರೆ

Related Articles

Back to top button