ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ಬೆನ್ನಲ್ಲೇ ರಾಜ್ಯ ರಾಜಕೀಯ ಹೊಸ ವಿದ್ಯಮಾನಗಳಿಗೆ ಕಾರಣವಾಗಿದ್ದು, ಸಿಎಂ ಬದಲಾವಣೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನಕ್ಕಾಗಿ ನಾಲ್ವರು ನಾಯಕರ ಹೆಸರು ಕೇಳಿಬರುತ್ತಿದೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾದರೆ ಸಿಎಂ ಸ್ಥಾನಕ್ಕಾಗಿ ಪ್ರಮುಖ ನಾಲ್ವರು ಹೆಸರು ಕೇಳಿಬರುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹುಬ್ಬಳ್ಳಿ -ಧಾರವಾಡ ಪಶ್ಚಿಮ ಶಾಸಕ ಅರವಿಂದ್ ಬೆಲ್ಲದ್, ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೆಸರು ಮುನ್ನೆಲೆಗೆ ಬಂದಿದೆ.
ಒಂದು ವೇಳೆ ಸಿಎಂ ಬದಲಾವಣೆಯಾಗಿ, ಹೊಸ ಸಿಎಂ ಬಂದರೆ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದ್ದು, ಸಂಪುಟ ರಚನೆ ನೂತನ ಸಿಎಂ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಹಾಗಾಗಿ ವಲಸೆ ಸಚಿವರಿಗೂ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಅಧಿಕಾರ ಹೋದ್ರೆ ಹೋಗಲಿ, ಗೂಟ ಹೋಯ್ತು ಅಂದುಕೊಳ್ತೀನಿ; ಈಶ್ವರಪ್ಪ ಕಿಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ