Kannada NewsKarnataka NewsLatestPolitics
*ಲೋಕಸಭಾ ಚುನಾವಣೆ: BJP-JDS ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ನಮ್ಮ ವರಿಷ್ಠರಿಗೆ ಬಿಟ್ಟದ್ದು. ಈಗಾಗಲೇ ವರಿಷ್ಠರು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆ ಮಾತುಕತೆ ನಡೆದಿದೆ ಎಂದರು.
ಇನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಕೂಡ ಕೆಲವೊಂದು ಭಾವನೆಗಳನ್ನು ತಿಳಿಸಿದ್ದಾರೆ. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಯಾಗಲಿದೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಲಲಾಗುತ್ತಿದೆ. ಇದೇ ವಿಚಾರ ಚರ್ಚೆ ನಿಟ್ಟಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದು, ಎನ್ ಡಿಎ ನಾಯಕರ ಸಭೆಯಲ್ಲಿ ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.