ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಏ.14ರವರೆಗೆ ಯಾರೊಬ್ಬರೂ ಮನೆಯಿಂದ ಹೊರಬರಬಾರದು. ಏ.14ರ ಬಳಿಕ ಲಾಕ್ ಡೌನ್ ವಿಸ್ತರಿಸಬೇಕೋ ಬೇಡವೋ ಎಂಬುದನ್ನು ನಾಳೆ ಪ್ರಧಾನಿ ಮೋದಿಯವರ ಜತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಏ.14ರವರೆಗೆ ಯಾರೊಬ್ಬರೂ ಹೊರಬರುವಂತಿಲ್ಲ. ಮನೆಯಲ್ಲೇ ಇರಬೇಕು. ಒಂದೊಮ್ಮೆ ಹೊರಬಂದರೆ ಅಂತವರ ವಿರುದ್ಧ ಕಾಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಬೆಂಗಳೂರಿನಲ್ಲಿ 10 ಸಾವಿರ ವೆಹಿಕಲ್ ಜಪ್ತಿ ಮಾಡಲಾಗಿದ್ದು, ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ. ಜನರಿಗೆ ಆಹಾರ ಧಾನ್ಯ, ತರಕಾರಿಗೆ ಹತ್ತಿರದಲ್ಲೇ ಸಿಗುವಂತೆ ವ್ಯವಸ್ಥೆ ಮಾಡಿದ್ದೇವೆ ಎಂದರು.
ಕೆಲ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿರಲಿಲ್ಲ. ಇಂದು ಸಂಜೆಯೊಳಗೆ ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುತ್ತಿದೆ. ಉಸ್ತುವಾರಿ ಸಚಿವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ಹಾಗೂ ಜನರಿಗೆ ಆಹಾರ ಧಾನ್ಯ ಸೂಕ್ತ ರೀತಿಯಲ್ಲಿ ತಲುಪುವ ವ್ಯವಸ್ಥೆಗಳನ್ನು ನೋಡಿಕೊಳ್ಳಬೇಕು ಎಂದು ಹೇಳಿದರು.
ಇನ್ನು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ವೈರಸ್ ನಿಯಂತ್ರಣದ ಬಗ್ಗೆ ಹಾಗೂ ಲಾಕ್ ಡೌನ್ ವಿತರಣೆ ಬಗ್ಗೆ ಚರ್ಚೆ ನಡೆದಿದ್ದು, ಈ ವೇಳೆ ಏ.14ರ ಬಳಿಕ ಇನ್ನೂ 15 ದಿನಗಳ ಕಾಲ ಲಾಕ್ ಡೌನ್ ಮುಂದುವರೆಸಬೇಕು ಎಂದು ಸಚಿವರುಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ