ಪ್ರಗತಿವಾಹಿನಿ ಸುದ್ದಿ; ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಿಯಂತ್ರಣಕ್ಕೆ ಅಗತ್ಯ ಕ್ರಮ ಕಿಗೊಳ್ಳಲಾಗಿದೆ. ಆದರೆ ಜನರು ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೀದರ್ ನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಲಾಕ್ ಡೌನ್ ಜಾರಿ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ ಜನ ಸಹಕರಿಸದಿದ್ದರೆ ಅನಿವಾರ್ಯವಾಗಿ ಲಾಕ್ ಡೌನ್ ಮಾಡಬೇಕಾಗುತ್ತದೆ. ಈ ಬಗ್ಗೆ ಸರ್ವಪಕ್ಷ ಸಭೆ ಕರೆದು ನಿರ್ಧರಿಸುತೇವೆ ಎಂದರು.
ಕೊರೊನಾ ಎರಡನೇ ಅಲೆ ಅತಿವೇಗವಾಗಿ ಹೆಚ್ಚುತ್ತಿದೆ. ಜನರೆ ಎಚ್ಚೆತ್ತು ಮುಂಜಾಗೃತ ವಹಿಸಿ, ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಪ್ರಧಾನಿ ಮೋದಿ ಲಾಕ್ ಡೌನ್ ಅಗತ್ಯವಿಲ್ಲ ಎಂದಿದ್ದಾರೆ. ಆದರೆ ಪರಿಸ್ಥಿತಿ ನೋಡಿಕೊಂಡು ಮುದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
1,68,912 ಜನರಲ್ಲಿ ಸೋಂಕು ಪತ್ತೆ; ಕೇಂದ್ರ ಆರೋಗ್ಯ ಇಲಾಖೆ ತಜ್ಞರ ತಂಡ ರಾಜ್ಯಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ