
ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಕಚ್ಚಾ ಬಾಂಬ್ ಸ್ಫೋಟಗೊಂಡ ಪರಿಣಾಮ ಬಿಜೆಪಿಯ 6 ಜನ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24ನೇ ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಈ ದಾಳಿ ನದೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಪೊಲೀಸರು ಈ ಆರೋಪ ತಳ್ಳಿ ಹಾಕಿದ್ದು, ಆರೋಪಿಗಳು ಬಾಂಬ್ ತಯಾರಿಸುತ್ತಿದ್ದ ವೇಳೆ ಏಕಾಏಕಿ ಬಾಂಬ್ ಸಿಡಿದಿದೆ ಎಂದು ಹೇಳಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.