Kannada NewsLatest

ಬೆಳಗಾವಿಯಲ್ಲಿ ಇನ್ನಷ್ಠು ಕಠಿಣ ಕ್ರಮ?; 5 ಜಿಲ್ಲೆಗಳ ಜೊತೆ ಸಿಎಂ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು 5 ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳಾದ ಬೆಳಗಾವಿ, ಕಲಬುರ್ಗಿ, ವಿಜಯಪುರ, ಮೈಸೂರು, ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಜಾರಿ ಬಗ್ಗೆ ಚರ್ಚಿಸಲಿದ್ದಾರೆ.

ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ, ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು, ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಹಾಗೂ ಕೊರೊನಾ 3ನೇ ಅಲೆ ಎಚ್ಚರಿಕೆ ಹಿನ್ನೆಲೆಯಲ್ಲಿ ನಡೆಸಬೇಕಾದ ಸಿದ್ಧತೆಗಳ ಬಗ್ಗೆ ಚರ್ಚಿಸಲಿದ್ದಾರೆ.
ಜೂನ್ 30ರವರೆಗೆ ಲಾಕ್ಡೌನ್? : ಕೇಂದ್ರ ಗೃಹ ಇಲಾಖೆ ಸೂಚನೆ ನೋಡಿ

Related Articles

Back to top button