ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಉಪಯೋಗವಾಗಲಿ ಎಂದು ಸರ್ಕಾರಿ ಆಸ್ಪತ್ರೆಗಳಲ್ಲಿ 27,718ಕ್ಕೂ ಹೆಚ್ಚು ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇನ್ನೂ ಖಾಸಗಿ ಆಸ್ಪತ್ರೆಗಳಲ್ಲೂ 1955 ಹಾಸಿಗೆ ಕಾಯ್ದಿರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಯಡಿಯೂರಪ್ಪ ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿದ್ದರು. ಸಭೆ ಬಳಿಕ ಮಾತನಾಡಿದ ಅವರು, ಜಿಲ್ಲಾ ಆಸ್ಪತ್ರೆಗಳಲ್ಲಿ ಐಸಿಯು ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 120 ಹೆಚ್ಚುವರಿ ಆಂಬುಲೆನ್ಸ್ ಗಳ ಖರೀದಿಗೆ ಕ್ರಮ ವಹಿಸಲಾಗಿದೆ. ಜಿಲ್ಲೆಗಳಿಗೆ 1 ಲಕ್ಷ ರ್‍ಯಾಪಿಡ್ ಆಂಟಿಜೆನ್ ಕಿಟ್ ಗಳನ್ನು ಕಳುಹಿಸಿಕೊಡಲಾಗಿದೆ ಎಂದರು.
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳ ಮೇಲೂ ಸಾಕಷ್ಟು ನಿಗಾ ವಹಿಸಿದೆ. ಇನ್ನು ಪ್ರವಾಹವನ್ನೂ ಎದುರಿಸಲು ರಾಜ್ಯ ಸಿದ್ಧವಾಗಬೇಕಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ