ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ 7 ಸಚಿವರ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವಾಕಾಂಕ್ಷಿಗಳು ವರಿಷ್ಠರಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನಗೊಂಡಿರುವ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆ ಬಗ್ಗೆ ಶಾಸಕರಿಗೆ ಅಸಮಾಧಾನ, ವಿರೋಧವಿದ್ದರೆ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ ಎಂದಿದ್ದಾರೆ.
ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ ಮಾತನಾಡುವುದು ಬೇಡ. ಏನೇ ಇದ್ದರೂ ವರಿಷ್ಥರು ನಿರ್ಧರಿಸುತ್ತಾರೆ. ಈ ಬಗ್ಗೆ ವರಿಷ್ಠರಿಗೆ ದೂರು ನೀಡಲಿ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ