Latest

ಸಿಎಂ ಯಡಿಯೂರಪ್ಪ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ, ಸಿಎಂ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನ ಮಾಡಿದ್ದೇವೆ. ಯಡಿಯೂರಪ್ಪನವರ ನೇತೃತ್ವದ ಸರ್ಕಾರದ ಸಾಧನೆ ಶೂನ್ಯ, ಜನರ ವಿಶ್ವಾಸ ಕಳೆದುಕೊಂಡಿದೆ. ಯಡಿಯೂರಪ್ಪನವರ ಮಗ, ಮೊಮ್ಮಗ, ಅಳಿಯ ಎಲ್ಲಾ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಕೊರೊನಾ ಸಲಕರಣೆ ಖರೀದಿ, ಲ್ಯಾಪ್‌ಟಾಪ್, ಟ್ರಾನ್ಸ್​ಫಾರ್ಮ್​ ಎಲ್ಲದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ, ಆರ್ಥಿಕ ಅಧೋಗತಿಗೆ ಹೋಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಸಾವಿರಾರು ಕೋಟಿ ರೂ ಸಾಲ ಮಾಡುತ್ತಿದೆ. ರೈತ ವಿರೋಧಿಯಾದ ಭೂ ಸುಧಾರಣೆ, ಎಪಿಎಂಸಿ ಕಾಯಿದೆ ಮಂಡನೆ ಮಾಡಿದೆ. ಸಿಎಂ ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲ ವಿಶ್ವಾಸ ಕಳೆದುಕೊಂಡಿದೆ. ಹೀಗಾಗಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂದಿಸುತ್ತೇವೆ ಎಂದರು.

ಅಲ್ಲದೇ ಅವಿಶ್ವಾಸ ನಿರ್ಣಯ ಮಂಡನೆಗೆ ಅವಕಾಶ ನೀಡುವಂತೆ ಕೋರಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button