Latest

ನೂತನ ಸಚಿವರಿಗೆ ಖಾತೆ ಹಂಚಿಕೆ; ಹಲವರ ಖಾತೆ ಬದಲಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು 7 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಹೊಸ ಸಚಿವರಿಗೆ ಜವಾಬ್ದಾರಿ ನೀಡುವ ನಿಟ್ಟಿನಲ್ಲಿ ಹಲವು ಸಚಿವರ ಖಾತೆ ಅದಲು ಬದಲು ಮಾಡಲಾಗಿದೆ. ಖಾತೆ ಹಂಚಿಕೆ ಪಟ್ಟಿಯನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಭವನಕ್ಕೆ ಕಳುಹಿಸಿದ್ದಾರೆ.

ಉಮೇಶ್ ಕತ್ತಿ- ಆಹಾರ ಮತ್ತು ನಾಗರಿಕ ಪೂರೈಕೆ
ಎಸ್.ಅಂಗಾರ- ಮೀನುಗಾರಿಕೆ ಮತ್ತು ಬಂದರು
ಸಿಸಿ ಪಾಟೀಲ್- ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ
ಅರವಿಂದ ಲಿಂಬಾವಳಿ-ಅರಣ್ಯ ಇಲಾಖೆ
ಮುರುಗೇಶ್ ನಿರಾಣಿ-ಗಣಿ ಮತ್ತು ಭೂ ವಿಜ್ನಾನ
ಎಂಟಿಬಿ ನಾಗರಾಜ್-ಅಬಕಾರಿ ಇಲಾಖೆ
ಸಿ.ಪಿ.ಯೋಗೇಶ್ವರ್-ಸಣ್ಣ ನೀರಾವರಿ ಖಾತೆ ನೀಡುವ ಸಾಧ್ಯತೆ ದಟ್ಟವಾಗಿದೆ.

ಇನ್ನು ಜೆ.ಸಿ ಮಾಧುಸ್ವಾಮಿ ಬಳಿಯಿದ್ದ ಕಾನೂನು ಮತ್ತು ಸಂಸದೀಯ ಖಾತೆಯನ್ನು ಹೆಚ್ಚುವರಿಯಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಡಾ.ಕೆ.ಸುಧಾಕರ್ ಬಳಿ ಇದ್ದ ವೈದ್ಯಕೀಯ ಶಿಕ್ಷಣ ಖಾತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಜೆ.ಸಿ.ಮಾಧುಸ್ವಾಮಿ ಅವರಿಗೆ ವಹಿಸಲಾಗಿದೆ. ಆನಂದ್ ಸಿಂಗ್ ಬಳಿಯಿದ್ದ ಅರಣ್ಯ ಇಲಾಖೆಯನ್ನು ಅರವಿಂದ ಲಿಂಬಾವಳಿಗೆ ನೀಡಲಾಗಿದ್ದು, ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿದೆ. ಆರ್.ಶಂಕರ್ ಗೆ ಪೌರಾಡಳಿತ, ಗೋಪಾಲಯ್ಯ ಅವರಿಗೆ ತೋಟಗಾರಿಕೆ ಮತ್ತು ಸಕ್ಕರೆ ಹಾಗೂ ನಾರಾಯಣ ಗೌಡ ಯುವಜನ ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ.

Home add -Advt

Related Articles

Back to top button