ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಜನರನ್ನು ಆತಂಕಕ್ಕೀಡು ಮಾಡುತ್ತಿದೆ. ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯವಿದೆ ಎಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಧ್ಯ ರಾಜ್ಯದಲ್ಲಿ ನೈಟ್ ಕರ್ಫೂ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಇಂಗ್ಲೆಂಡ್ ನಿಂದ ಚೆನ್ನೈ ಹಾಗೂ ದೆಹಲಿಗೆ ಬಂದಿರುವ ಹಲವರಲ್ಲಿ ಕೊರೊನಾ ಹೊಸ ಪ್ರಹೇದ ಪತ್ತೆಯಾಗಿದೆ. ಹಾಗಾಗಿ ಎಷ್ಟೇ ಕಟ್ಟೆಚ್ಚರ ವಹಿಸಿದರೂ ಕಡಿಮೆ. ಕೊರೊನಾ ಹೊಸ ರೂಪಾಂತರದ ಬಗ್ಗೆ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಧಾನಿ ಮೋದಿ ಕೂಡ ಎಚ್ಚರಿಕೆಯಿಂದಿರಲು ಸೂಚಿಸಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುವುದು ಎಂದರು.
ಇನ್ನು ಕೊರೊನಾ ಕಾರಣದಿಂದ ಆರೋಗ್ಯದ ಹಿತದೇಉಷ್ಟಿಯಿಂದ ಈ ವರ್ಷ ಹೊಸ ವರ್ಷದ ಸಂಭ್ರಮಾಚರಣೆ ಇಲ್ಲ. ಸಧ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ