ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಪರೇಷನ್ ಕಮಲಕ್ಕಾಗಿ ಆಮಿಷವೊಡ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್ ತನಿಖೆಗೆ ಆದೇಶಿಸಿದೆ.
ಜೆಡಿಎಸ್ ಬಿಟ್ಟು ಬಿಜೆಪಿಗೆ ಬರುವಂತೆ ಆಮಿಷವೊಡ್ಡಿ ಆಪರೇಷನ್ ಕಮಲ ನಡೆಸಲಾಗುತ್ತಿದೆ ಎಂದು ಆರೋಪಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ದಾಖಲಿಸಿದ್ದರು. ಸಿಎಂ ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಂ ಗೌಡ ಹಾಗೂ ಎಂ.ಬಿ.ಮರಮಕಲ್ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.
ಎಫ್ಐಆರ್ ರದ್ದು ಕೋರಿ ಯಡಿಯೂರಪ್ಪ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಎಫ್ ಐ ಆರ್ ಗೆ ತಡೆ ನೀಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ, ಇದೀಗ ತಡೆಯಾಜ್ಞೆ ತೆರವುಗೊಳಿಸಿ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ಆದೇಶಿಸಿದೆ.
ಇನ್ಮುಂದೆ ರಾತ್ರಿ ಮೊಬೈಲ್ ಚಾರ್ಜ್ ಮಾಡುವುದು ನಿಷೇಧ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ