Latest

ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರ ಜೊತೆ ಸಿಎಂ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ 23 ರೋಗಿಗಳ ದುರಂತದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಆಕ್ಸಿಜನ್ ಉತ್ಪಾದಕರ ಜೊತೆ ಮಹತ್ವದ ಸಭೆ ನಡೆಸಿದೆ.

ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರ ಸಭೆಯಲ್ಲಿ ಹಲವು ಮಹತ್ವದ ವಿಚಾರ ಚರ್ಚಿಸಲಾಯಿತು.

ಸಭೆಯ ಪ್ರಮುಕ ಅಂಶಗಳು:

1. ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು.
2. ಆಕ್ಸಿಜನ್ ಟ್ಯಾಂಕರ್‍ಗಳ ಫಿಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮ ಕೈಗೊಳ್ಳುವುದು.
3. ಆಕ್ಸಿಜನ್ ಟ್ಯಾಂಕರ್‍ಗಳು ತಡೆರಹಿತ ಪ್ರಯಾಣಕ್ಕಾಗಿ ಗ್ರಿನ್ ಕಾರಿಡಾರ್‍ಗಳನ್ನು ಒದಗಿಸುವುದು.
4. ಟೋಲ್‍ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್‍ಗಳಿಗೆ ನಿರ್ದೇಶನ ನೀಡುವುದು.
5. ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ ಟ್ಯಾಂಕರ್‍ಗಳನ್ನು ಆಕ್ಸಿಜನ್ ಸಾಗಣೆಗೆ ಪರಿವರ್ತಿಸಲು ಕ್ರಮವಹಿಸುವುದು.
6. ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗಾಗಿ ಎಲ್‍ಪಿಜಿ ಟ್ಯಾಂಕರ್‍ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳುವುದು.
7. ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಗೆ ಸಂಪರ್ಕಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡಲು ಕೋರಲಾಯಿತು.
8.ಲಭ್ಯವಿರುವ ಟ್ಯಾಂಕ್ ರಗಳನ್ನು ಗರಿಷ್ಠ ಪ್ರಮಾಣದಲ್ಲಿ‌ ಬಳಸಿಕೊಳ್ಳಲು ಸೂಚಿಸಲಾಯಿತು
ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅಗತ್ಯ ಸೌಕರ್ಯ; ನೋಡಲ್ ಅಧಿಕಾರಿ ನೇಮಕ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button