ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೈತರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂಪಾಯಿಗಳನ್ನು ಮೊದಲ ಕಂತಿನ ಹಣ ಬಿಡುಗಡೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜ್ಯದ ಸುಮಾರು 52.50 ಲಕ್ಷ ಕೃಷಿ ಕುಟುಂಬಗಳಿಗೆ ಲಾಭದಾಯಕವಾಗಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಈ ವರ್ಷದ ಮೂರು ಕಂತುಗಳಲ್ಲಿ ಮೊದಲ ಕಂತಿನ ಮೊತ್ತ 1049 ಕೋಟಿ ರೂ. ಬಿಡುಗಡೆ ಮಾಡಿರುವ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಕರ್ನಾಟಕದ ರೈತರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.
ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ