ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಧಾನಿ ಮೋದಿ ಜತೆ ಸಂವಾದ ನಡೆಸಿದ್ದು, ನಿಯಂತ್ರಣಕ್ಕೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಕೊರೊನಾ ವೈರಸ್ ದೇಶಾದ್ಯಂತ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಇದೇ ವೇಳೆ ಸಿಎಂ ಬಿಎಸ್ವೈ ಅವರೊಂದಿಗೂ ಸಂವಾದ ನಡೆಸಿದ್ದು, ರಾಜ್ಯದಲ್ಲಿ ಸೋಂಕಿನ ಬಗ್ಗೆ ಸದ್ಯದ ಚಿತ್ರಣವನ್ನು ಸಿಎಂ ಯಡಿಯೂರಪ್ಪ ತೆರೆದಿಟ್ಟರು.
ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು, ವೈರಸ್ ಹರಡದಂತೆ ಟಾಸ್ಕ್ ಫೋರ್ಸ್ ತಂಡ ಕೈಗೊಂಡಿರುವ ಕ್ರಮಗಳು, ರಾಜ್ಯದಲ್ಲಿ ವೈರಸ್ ಸೋಂಕಿತರ ಸಂಖ್ಯೆ, ಸದ್ಯ ಅವರ ಪರಿಸ್ಥಿತಿ, ಸೋಂಕಿತರು ಗುಣಮುಖರಾಗಿರುವುದರ ಬಗ್ಗೆ ಮಾಹಿತಿ ನೀಡಿದರು.
ಈ ವೇಳೆ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಡಿಸಿಎಂ ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ರಾವ್ ಭಾಗಿಯಾಗಿದ್ದರು. ಜೊತೆಗೆ ಕೊರೋನಾ ಟಾಸ್ಕ್ ಫೋರ್ಸ್ ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ