Latest

ದಿಢೀರ್ ಬೆಂಗಳೂರಿಗೆ ಆಗಮಿಸಿದ ಪ್ರಹ್ಲಾದ್ ಜೋಶಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.

Related Articles

ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರಹ್ಲಾದ್ ಜೋಶಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದೇ ವೇಳೆ ಸಚಿವ ಜಗದೀಶ್ ಶೆಟ್ಟರ್ ಕೂಡ ಆರ್.ಎಸ್.ಎಸ್.ನಾಯಕರನ್ನು ಭೇಟಿಯಾಗಿದ್ದರು. ಈ ಎಲ್ಲಾ ಬೆಳವಣಿಗಗಳ ನಡುವೆ ಇಂದು ಜೋಶಿ ಆರ್.ಎಸ್.ಎಸ್ ಸಭೆಯಲ್ಲಿ ಭಾಗಿಯಾಗುತ್ತಿದ್ದು, ಇದೀಗ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದು ನಾಳೆ 2 ವರ್ಷ ಪೂರೈಸುತ್ತಿದ್ದು, ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆಯಾಗಿ ಹೊಸ ಸಿಎಂ ಅಧಿಕಾರ ವಹಿಸಿಕೊಳ್ಳಲಿದ್ದಾರೆಯೇ ಎಂಬ ಕುತೂಹಲ ಮನೆ ಮಾಡಿದೆ.

Home add -Advt

9 ಜನರ ಸಾವು; ಮೂವರ ಕಣ್ಮರೆ, 73 ರಾಷ್ಟ್ರೀಯ ಹೆದ್ದಾರಿ ಕುಸಿತ

Related Articles

Back to top button