ಅಗತ್ಯ ವಸ್ತುಗಳು ಲಭ್ಯವಿದೆ, ರಾಜ್ಯದ ಜನತೆ ಭಯಪಡಬೇಕಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಯಾರಿಗೂ ಅಗತ್ಯ ವಸ್ತುಗಳ ಕೊರತೆ ಇಲ್ಲ ಹಾಗಾಗಿ ಯಾರೂ ಕೂಡ ಭಯ ಪಡಬೇಕಾಗಿಲ್ಲ ಎಂದು ಸಿಎಂ ಬಿ ಎಸ್ ಯದಿಯೂರಪ್ಪ ರಾಜ್ಯದ ಜನತೆಯಲ್ಲಿ ಧೈರ್ಯ ತುಂಬಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್​​ಡೌನ್​​ ಆಗಿದ್ದರೂ ಅಗತ್ಯ ವಸ್ತುಗಳ ಕೊರತೆ ಮಾಡಿಲ್ಲ, ಜನತೆ ಆತಂಕಪಡಬಾರದು ಎಂದರು.

ವಲಸಿಗರಿಗೆ ಶಾಲೆ ಮತ್ತು ಸಮುದಾಯ ಭವನಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ಅರ್ಧ ಲೀಟರ್ ಹಾಲು ಕೊಡಲು ತೀರ್ಮಾನ ಮಾಡಿದ್ದೇವೆ. ರಾಜ್ಯದಲ್ಲಿ ಜನಕ್ಕೆ ಬೇಕಾದ ಅಕ್ಕಿ, ಸಕ್ಕರೆ, ಅಡುಗೆ ಎಣ್ಣೆ ಎಲ್ಲವೂ ಸ್ಟಾಕ್ ಇದೆ. ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿ ಮಾಡಲಾಗುತ್ತಿದೆ. ಹಾಗಾಗಿ ಜನ ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಬಿಬಿಎಂಪಿಯಿಂದ ಎಲ್ಲೆಡೆ ಔಷಧಿ ಸಿಂಪಡಣೆ ಕಾರ್ಯಕ್ರಮ ನಡೆಯುತ್ತಿದೆ. ವಿದೇಶದಿಂದ ಭಾರತಕ್ಕೆ ಬಂದ ಅಂತಾರಾಷ್ಟ್ರೀಯ ಪ್ರವಾಸಿಗರ ಸ್ಕ್ರೀನಿಂಗ್​​ ಮಾಡಲಾಗುತ್ತಿದೆ. ಅದಕ್ಕಾಗಿ ಕೋವಿಡ್​​​-19 ವಾರ್​​ ರೂಮ್​​ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ವಿವರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button