ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್.ಆರ್.ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ,ಇದು ಜನತೆಯ ಜಯವಾಗಿದ್ದು, ಜನರು ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ ಪ್ರಕಟವಾಗಿರುವುದರಿಂದ ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚಿಂತನೆ ನಡೆಸಲಾಗುತ್ತದೆ. ಸಂಪುಟದಲ್ಲಿ ಕೆಲವರನ್ನು ಕೈಬಿಟ್ಟು, ಇನ್ನು ಕೆಲವರನ್ನು ಸೇರಿಸಿಕೊಳ್ಳಲಾಗುತ್ತೆ. ನಾಳೆ ವರಿಷ್ಠರ ಜೊತೆ ದೂರವಾಣಿ ಮೂಲಕ ಚರ್ಚಿಸಿ ಬಳಿಕ ದೆಹಲಿಗೆ ತೆರಳುತ್ತೇನೆ ಎಂದರು.
ಇನ್ನು ಬಸವಕಲ್ಯಾಣ ಕ್ಷೇತ್ರ ಉಪಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಲ್ಲ ಎಂದು ಸ್ಪಷ್ಟ ಪಡಿಸಿದ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಗಳಿಗೆ ಈಗ ಮತದಾರರೇ ಉತ್ತರ ನೀಡಿದ್ದಾರೆ. ಹೀಗಾಗಿ ನಾನೇನು ಪ್ರತಿಕ್ರಿಯೆ ನೀಡಲ್ಲ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ