ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ ಅವ್ಹಿಶ್ವಾಸ ನಿರ್ಣಯ ಮಂದನೆ ವಿಚಾರವಾಗಿ ಮಾತನಾಡಿರುವ ಸಿಎಂ ಬಿ ಎಸ್ ಯಡಿಯೂರಪ್ಪ ಅವರು 6 ತಿಂಗಳಿಗೊಮ್ಮೆ ಹೀಗೆ ಮಾಡುತ್ತಿರಲಿ. ಅದರಿಂದ ನನಗೆ ವಿಶ್ವಾಸ ಬರುತ್ತದೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ಆಗಾಗ ಹೀಗೆ ಅವಿಶ್ವಾಸ ನಿರ್ಣಯ ಮಂಡಿಸುತ್ತಿದ್ದರೆ ನನಗೆ ವಿಶ್ವಾಸ ಬರುತ್ತದೆ. ಅವರು ನನಗೆ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಮಂತ್ರಿ ಮಂಡಲ ವಿಶ್ವಾಸ ಕಳೆದುಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಸ್ಪೀಕರ್ ಕಾಗೇರಿ ಅನುಮತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ