ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿ ಗೊಂದಲಗಳಿಲ್ಲ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ಮತ್ತೊಮ್ಮೆ ತೆರೆ ಎಳೆದಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳೂ ಇಲ್ಲ. ಯಾರೋ ಒಂದಿಬ್ಬರು ಹೇಳಿಕೆ ನೀಡುತ್ತಿರಬಹುದು. ಅಂತವರನ್ನು ಕರೆದು ಅವರ ಸಮಸ್ಯೆಗಳೇನು ಎಂಬುದನ್ನು ಬಗೆಹರಿಸಿಕೊಳ್ಳಲಾಗುವುದು ಎಂದರು.
ಎಂಎಲ್ ಸಿ ಹೆಚ್ ವಿಶ್ವನಾಥ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಅವರ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಅವರ ವಿರುದ್ಧ ಕ್ರಮದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಆದರೆ ವಿಜಯೇಂದ್ರ ವಿರುದ್ಧದ ಆರೋಪಗಳು ಸುಳ್ಳು. ಯಾವುದೇ ಇಲಾಖೆಯಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಇದೆಲ್ಲವೂ ಆಧಾರರಹಿತ ಆರೋಪಗಳಾಗಿವೆ. ಇನ್ನು ನೀರಾವರಿ ಇಲಾಖೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಈ ಬಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನೇ ಕೇಳಿ ತಿಳಿದುಕೊಳ್ಳಬಹುದು ಎಂದು ಹೇಳಿದರು..
ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗಬಾರದು: ಹೆಚ್.ವಿಶ್ವನಾಥ್ ಕಳಕಳಿ!
ಸನ್ನಿ ಲಿಯೋನ್ ಗೆ ಪೈಪೋಟಿ ನೀಡಿದ ಶಮಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ