ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಿತಿ ಮೀರುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ ದೌನ್ ಜಾರಿಯಾಗುವ ಸಾಧ್ಯತೆ ಇದ್ದು, ಇಂದು ಸಂಜೆ ನಿರ್ಧಾರ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಸೂಚನೆಗೆ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ, ಕೋವಿಡ್ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಏನು ನಿರ್ದೇಶನ ನೀಡುತ್ತಾರೆಯೋ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ. ಸುಪ್ರೀಂ ಕೋರ್ಟ್ ಸಲಹೆ ಸೇರಿದಂತೆ ಎಲ್ಲವನ್ನೂ ಇಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಿದ್ದಾರೆ. ಪ್ರಧಾನಿ ಮೋದಿ ಯಾವ ಮಾರ್ಗದರ್ಶನ ನೀಡುತ್ತಾರೋ ಅದನ್ನು ಪಾಲಿಸಲಾಗುತ್ತದೆ. ಅವರು ಹೇಳಿದಂತೆ ಲಾಕ್ ಡೌನ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇನ್ನು ಸಚಿವರುಗಳಿಗೆ ತಮ್ಮ ಕ್ಷೇತ್ರಗಳಿಗೆ ತೆರಳಿ, ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ ಹಾಗೂ ಸೋಂಕಿತರ ಚಿಕಿತ್ಸೆ ವ್ಯವಸ್ಥೆ ಬಗ್ಗೆ ಸೂಚಿಸಲಾಗಿದೆ. ಅದರಂತೆ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ದೇಶಾದ್ಯಂತ ಲಾಕ್ ಡೌನ್ ಜಾರಿ?, ಕೇಂದ್ರ ಸಂಪುಟ ಸಭೆ ಇಂದು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ