
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದರು.
ಸರ್ಕಾರದ 2 ವರ್ಷದ ಸಾಧನಾ ಸಮಾವೇಶದ ವೇಳೆ ಭಾವುಕರಾಗಿ ಮಾತನಾಡಿದ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಬಳಿಕ ಸಂಪುಟ ಸಹೋದ್ಯೋಗಿಗಳ ಜೊತೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಹಸ್ತಾಂತರಿಸಿದರು.