Latest

ಹೊಸ ಸಿಎಂ; ಹೊಸ ಸಂಪುಟ; ಯಾರ್ಯಾರು ಔಟ್? ಯಾರ್ಯಾರು ಇನ್…?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಯಡಿಯೂರಪ್ಪ ರಾಜೀನಾಮೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ನೂತನ ಸಿಎಂ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹೊಸ ಸಚಿವ ಸಂಪುಟ ರಚನೆಯಾಗಲಿದ್ದು, ಕೆಲ ಹಾಲಿ ಸಚಿವರಿಗೆ ಗೇಟ್ ಪಾಸ್ ನಿಡುವ ಸಾಧ್ಯತೆ ದಟ್ಟವಾಗಿದೆ.

ಹಾಲಿ ಇರುವ 10-12 ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಘಟಾನುಘಟಿ ಸಚಿವರಿಗೆ ಮಂತ್ರಿ ಸ್ಥಾನ ಕೈತಪ್ಪುವ ಭೀತಿ ಎದುರಾಗಿದೆ.

ಸಚಿವರಾದ ಪ್ರಭು ಚೌವ್ಹಾಣ್,  ಸಿ.ಸಿ.ಪಾಟೀಲ್, ಶ್ರೀಮಂತ್ ಪಾಟೀಲ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಕೆ.ಸಿ.ನಾರಾಯಣಗೌಡ ಮೊದಲಾದವರಿಗೆ ಕೊಕ್ ನೀಡುವ ಸಾಧ್ಯತೆ ಇದೆ.

ನೂತನ ಸಂಪುಟದಲ್ಲಿ ಬಾಲಚಂದ್ರ ಜಾರಕಿಹೊಳಿ, ಅಭಯ ಪಾಟೀಲ, ಎಂ.ಪಿ.ರೇಣುಕಾಚಾರ್ಯ, ಸುನೀಲ್ ಕುಮಾರ್, ಎಸ್.ಎ.ರಾಮದಾಸ್, ರಾಜುಗೌಡ, ಪಿ.ರಾಜೀವ್, ಹಾಲಪ್ಪ ಆಚಾರ್, ಪ್ರೀತಂ ಗೌಡ, ರೂಪಾಲಿ ನಾಯ್ಕ್ , ಪೂರ್ಣಿಮಾ ಶ್ರೀನಿವಾಸ್ ಗೆ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮುಂದಿನ ಸಂಪುಟದಲ್ಲಿ ಬೆಳಗಾವಿಯಿಂದ ಯಾರ್ಯಾರಿಗೆ ಸ್ಥಾನ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button