ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣ, ಕಾವೇರಿ ನಿವಾಸದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಸ್ವಯಂ ಕ್ವಾರಂಟೈನ್ ಆಗಲು ನಿರ್ಧರಿಸಿದ್ದಾರೆ.
ಕೊರೊನಾ ಭೀತಿ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಸ್ವಯಂ ನಿರ್ಧಾರಗಳನ್ನು ಕೈಗೊಂಡಿದ್ದು, 5 ದಿನ ಸ್ವಯಂ ಕ್ವಾರಂಟೈನ್ ಗೆ ಸಿಎಂ ಒಳಗಾಗಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲೇ ಐದು ದಿನ ಇರಲು ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಹಿನ್ನಲೆಯಲ್ಲಿ ಎಲ್ಲಾ ಅಧಿಕೃತ ಸಭೆ, ಕಾರ್ಯಮಗಳನ್ನು ರದ್ದು ಮಾಡಿದ್ದು, ಮುಂದಿನ ಐದು ದಿನಗಳ ಕಾಲ ಕಾವೇರಿ ನಿವಾಸದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲು ನಿರ್ಧರಿಸಿದ್ದಾರೆ.
ಇನ್ನು ತುರ್ತು ಕಾರ್ಯದ ನಿಮಿತ್ತ ಭೇಟಿಗೆ ಬರುವ ಅಧಿಕಾರಿಗಳು, ಶಾಸಕರಿಗೆ ಮಾತ್ರ ನಿರ್ಧಿಷ್ಟ ಅಂತರದಲ್ಲಿ ಹಾಗೂ ಮುಂಜಾಗೃತಾ ನಿಯಮಗಳನ್ನು ಪಾಲಿಸಿ ಸಿಎಂ ಯಡಿಯೂರಪ್ಪ ಭೇಟಿಗೆ ಅವಕಾಶ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ