
ಬಿಜೆಪಿ ಹಿಂದೆ ಮಾಡಿದ ತಪ್ಪನ್ನೆ ಮಾಡುತ್ತಿರುವುದೇಕೆ? ಎಂದು ಪ್ರಶ್ನೆ
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ವದಂತಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿರುವ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ, ಬಿಜೆಪಿ ಹಳೇ ತಪ್ಪನ್ನೆ ಮತ್ತೆ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವರೇ ಬಿ.ಎಸ್.ಯಡಿಯೂರಪ್ಪ. ಅವರು ಬೇರೆ ನಾಯಕರಿಗೆ ಚಮಚ ಆಗದೇ ಕಾರ್ಯನಿರ್ವಹಿಸುತ್ತಿರುವುದರಿಂದ ಬಿಎಸ್ ವೈ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಷಡ್ಯಂತ್ರವನ್ನು ಕೆಲವರು ನಡೆಸಿದ್ದಾರೆ ಎಂದಿದ್ದಾರೆ.
ಯಡಿಯೂರಪ್ಪ ಇಲ್ಲದೇ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಬಿಜೆಪಿ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಯಾಕೆ ಮಾಡಲು ಹೊರಟಿದೆ? ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಸುಬ್ರಹ್ಮಣಿಯನ್ ಸ್ವಾಮಿ ಸಿಎಂ ಯಡಿಯೂರಪ್ಪನವರಿಗೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸಿದ್ದು, ಸಿಎಂ ಬದಲಾವಣೆ ನಿಟ್ಟಿನಲ್ಲಿ ನಡೆಸುತ್ತಿರುವ ಹಲವರ ತಂತ್ರವನ್ನು ಖಂಡಿಸಿದ್ದಾರೆ.
ಸಿಎಂ ಯಡಿಯೂರಪ್ಪ ಪರ ಸಿದ್ಧಗಂಗಾ ಶ್ರೀ ಬ್ಯಾಟಿಂಗ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ