ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವಿಲ್ ಜಡ್ಜ್ ಜೆಎಂಎಫ್ ಸಿ ಕೋರ್ಟ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು, ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು. ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಗೋಕಾಕ್ ಪೊಲೀಸ್ ಠಾಣೆಯಿಂದ ನ್ಯಾಯಾಲಯದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗಿತ್ತು. ಆದರೆ ನ್ಯಾಯಾಲಯ ಇದನ್ನು ತಿರಸ್ಕರಿಸಿ ಮುಖ್ಯಮಂತ್ರಿ ಬಿ .ಎಸ್ ಯಡಿಯೂರಪ್ಪ ಅವರಿಗೆ ಸೆಪ್ಟೆಂಬರ್ 1ರಂದು ನ್ಯಾಯಾಲಯಕ್ಕೆ ಹಾಜರಾಗುತೆ ಸಮನ್ಸ್ ಜಾರಿ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ