
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಲೆಕ್ಟ್ರಿಕ್ ಕಾರು ದೈತ್ಯ ಅಮೆರಿಕಾದ ಟೆಸ್ಲಾ ಕಂಪನಿ ತನ್ನ ಕಾರು ತಯಾರಿಕಾ ಘಟಕವನ್ನು ರಾಜಧಾನಿ ಬೆಂಗಳೂರಿನಲ್ಲಿ ಆರಂಭಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಯಡಿಯೂರಪ್ಪ, ಟೆಸ್ಲಾ ಕಂಪನಿ ಕಳೆದ ತಿಂಗಳು ಟೆಸ್ಲಾ ಇಂಡಿಯಾ ಮೋಟಾರ್ಸ್ ಆಂಡ್ ಎನರ್ಜಿ ಪ್ರೈವೆಟ್ ಲಿಮಿಟೆಡ್ ಕಂಪನಿ ಬೆಂಗಳೂರಿನಲ್ಲಿ ನೋಂದಣಿ ಮಾಡಿಕೊಂಡಿದ್ದು, ತನ್ನ ಸಂಶೋಧನೆ ಮತ್ತು ಅಭಿವೃದ್ಧಿ ಘಟಕ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ