Latest

6ನೇ ವೇತನ ಆಯೋಗ ಜಾರಿ ಸಾಧ್ಯವೇ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿ. ಯಾರದೋ ಮಾತು ಕೇಳಿ ಹಠಕ್ಕೆ ಬಿದ್ದು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸರ್ಕಾರ ಕೂಡ ಆರ್ಥಿಕ ಸಂಕಷ್ಟದಲ್ಲಿದೆ. ಇಂಥಹ ಸಂದರ್ಭದಲ್ಲಿ 6ನೇ ವೇತನ ಆಯೋಗ ಜಾರಿ ಸಾಧ್ಯವೇ ಇಲ್ಲ. ಈ ಬಗ್ಗೆ ನಾನು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೆನೆ. ಮುಷ್ಕರ ನಿರತರು ಅರ್ಥಮಾಡಿಕೊಳ್ಳಬೇಕು. ಹಠಕ್ಕೆ ಬೀಳದೆ ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು.

ಈಗಾಗಲೇ ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಅದರಲ್ಲೇನಾದರೂ ಸಮಸ್ಯೆಗಳಿದ್ದರೆ ಹೇಳಿ ಸರಿಪಡಿಸಲು ಸಿದ್ಧ. ಆದರೆ ಹಠಕ್ಕೆ ಬಿದ್ದು ಮುಷ್ಕರ ಮುಂದುವರೆಸುವುದು ಸರಿಯಲ್ಲ. ಸಾರಿಗೆ ವ್ಯವಸ್ಥೆ ಇರುವುದು ಸಾರ್ವಜನಿಕರ ಸೇವೆಗಾಗಿ. ಮುಷ್ಕರದಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಅವರ ಸಂಕಷ್ತವನ್ನು ಅರಿತು ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿದರು.
ಸಾರಿಗೆ ಮುಷ್ಕರ; 10 ಲಕ್ಷ ಪರಿಹಾರ ನೀಡುವಂತೆ ನೋಟೀಸ್ ಜಾರಿ ಮಾಡಿದ ವಿದ್ಯಾರ್ಥಿನಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button