Kannada NewsLatestNational
*ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಕೋಟಾ: ನೀಟ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಈ ಮೂಲಕ ಕೋಟಾದಲ್ಲಿ ಈ ವರ್ಷ ನಡೆದ 26 ನೇ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಇದಾಗಿದೆ.
20 ವರ್ಷದ ಮೊಹಮ್ಮದ್ ತನ್ವೀರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಉತ್ತರ ಪ್ರದೇಶದ ಮಹಾರಾಜ್ ಗಂಜ್ ಮೂಲದ ವಿದ್ಯಾರ್ಥಿ, ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಕೋಚಿಂಗ್ ಗಾಗಿ ಕೋಟಾಗೆ ಬಂದಿದ್ದ.
ತನ್ನ ರೂಮಿನಲ್ಲಿಯೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕಿಕೊಂಡಿದ್ದಾನೆ. ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಇಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಗೆ ತರಬೇತಿಗಾಗಿ ದೇಶದ ವಿವಿಧ ರಾಜ್ಯಗಳಿಂದ ರಾಜಸ್ಥಾನದ ಕೋಟಾಗೆ ವಿದ್ಯಾರ್ಥಿಗಳು ಬರುತ್ತಾರೆ. ಪರೀಕ್ಷ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಈ ವರ್ಷ ಸಾಲು ಸಾಲು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ.



