Kannada NewsLatest

ಉದ್ಧವ್ ಠಾಕ್ರೆ ಉದ್ಧಟತನಕ್ಕೆ ಖಡಕ್ ಉತ್ತರ ಕೊಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಖಡಕ್ ಉತ್ತರ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದಿದ್ದಾರೆ.

ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿ.ಎಸ್.ಯಡಿಯೂರಪ್ಪ, ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button