Kannada NewsLatest

ಬೆಳಗಾವಿ ಸೇರಿದಂತೆ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಅನ್ ಲಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು.

ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, ಮಂಡ್ಯ, ರಾಮನಗರ, ತುಮಕೂರು, ಗದಗ, ಕಲಬುರ್ಗಿ, ಹಾವೇರಿ, ಯಾದಗಿರಿ, ಬೀದರ್, ಕೋಲಾರ ಸೇರಿದಂತೆ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದ್ದು, ಬೆಳಿಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಮೈಸೂರಿನಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿರೇಟ್ ಇದ್ದು, ಈಗಿರುವ ಕಠಿಣ ಕ್ರಮ ಮುಂದುವರೆಯಲಿದೆ. ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಚಿತ್ರದುರ್ಗ, ವಿಜಯಪುರ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದೆ.

ಸಮಗ್ರ ಆದೇಶಕ್ಕೆ ಇಲ್ಲಿ ಕ್ಲಿಕ್ ಮಾಡಿ – Revised Extension of Guidelines Unlock 2.0

ಅನ್ ಲಾಕ್-2.0; ಯಾವುದಕ್ಕೆ ಅನುಮತಿ; ಯಾವುದಕ್ಕೆ ಅವಕಾಶವಿಲ್ಲ?

ಕೋವಿಡ್ 3ನೇ ಅಲೆ ಎಚ್ಚರಿಕೆ; ಮಕ್ಕಳು ಅನುಸರಿಸಬೇಕಾದ ಗೈಡ್ ಲೈನ್ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button